ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಚಕರು ಭಾಗವಹಿಸಿದ್ದರು. ಐದನೇ ತರಗತಿಯ ವಿದ್ಯಾರ್ಥಿನಿ ಅಪರ್ಣ ಕನ್ನಡ ಪ್ರತಿಜ್ಞಾ ವಿಧಿ ಬೋಧಿಸಿದರೆ, ವೇದ್ವಿ ಯು ಕನ್ನಡ ನಾಡು ನುಡಿಯ
ವಿಶೇಷತೆಯ ಕುರಿತು ತಿಳಿಸಿದಳು. ಕನ್ನಡ ಶಿಕ್ಷಕಿ ಹೇಮಾ ವೈಲಾಯ ಕನ್ನಡ ರಾಜ್ಯೋತ್ಸವದ ಮಹತ್ವ ಮತ್ತು ಕನ್ನಡವನ್ನು ಹೇಗೆ ಉಳಿಸಿ ಬೆಳೆಸಬೇಕು’ ಎಂಬುವುದರ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಕನ್ನಡ ನಾಡು ನುಡಿಯ ಬಗ್ಗೆ ಗೀತೆಗಳನ್ನು ಹಾಡಿದರು. 5ನೇ ತರಗತಿಯ ಪ್ರಣತಿ ನಿರೂಪಿಸಿ, ಸಮನ್ಯು ಸ್ವಾಗತಿಸಿ, ಅಭಯ್ ಗಣಪತಿ ವಂದಿಸಿದನು. ಕನ್ನಡ ಶಿಕ್ಷಕಿ ಶ್ರೀಮತಿ ಜಯಂತಿ ಸಹಕರಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್, ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಮತ್ತು ಎಲ್ಲ ಶಿಕ್ಷಕ ಮತ್ತು ಶಿಕ್ಷಕೇತರವೃಂದದವರು ಉಪಸ್ಥಿತರಿದ್ದರು.