ಸುಳ್ಯ:ಇಂಪ್ಯಾಕ್ಟ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಮತ್ತು ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಸುಳ್ಯದಲ್ಲಿ ನಡೆದ ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನ ವಿದ್ಯಾರ್ಥಿಗಳು ಹಲವು

ಬಹುಮಾನ ಪಡೆದು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ಡಾ . ರೇಣುಕಾ ಪ್ರಸಾದ್ ಕೆ ವಿ ಯವರು ಅಭಿನಂದಿಸಿದರು. ಪ್ರಾಂಶುಪಾಲರಾದ ಅರುಣ್ ಕುಮಾರ್ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಶಾಲಾ ಉಪ ಪ್ರಾಂಶುಪಾಲೆ ಶಿಲ್ಪಾ ಬಿದ್ದಪ್ಪ, ಎಲ್ಲಾ ಶಿಕ್ಷಕರು , ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.












