ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಕೇಂದ್ರೀಯ ಪಠ್ಯಕ್ರಮ ಆಧಾರಿತ ಶೈಕ್ಷಣಿಕ ಕಾರ್ಯಾಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಆಂಧ್ರಪ್ರದೇಶದ ವಿ4ಎಸ್ಇಇಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಅಧ್ಯಕ್ಷ ವೇಣುಗೋಪಾಲ ರೆಡ್ಡಿ ಕಾರ್ಯಾಗಾರ ನಡೆಸಿದರು.ಉದ್ದೇಶಪೂರ್ವಕ ಮತ್ತು
ಆಕರ್ಷಕ ತರಗತಿಯ ನಿರ್ವಹಣೆಯನ್ನು ನಡೆಸುವುದು, ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ ಹಾಗೂ ಸಕ್ರಿಯ ಕಲಿಕಾ ಅಭ್ಯಾಸಗಳು ಎಂಬ ವಿಷಯದ ಕುರಿತು ಕಾರ್ಯಾಗಾರ ನಡೆಯಿತು.ಶಾಲೆಯ ಸಂಚಾಲಕರಾದ
ಶಾಲೆಯ ಪ್ರಾಂಶುಪಾಲ ಅನೀಶ್ನಾದ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಸ್ವಾಗತಿಸಿ, ವಂದಿಸಿದರು.ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಹಾಗೂ ತರಗತಿಯ ಸಹಾಯಕರು ಈ ತರಬೇತಿಯಲ್ಲಿ ಪಾಲ್ಗೊಂಡಿದ್ದರು.










