ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಪರ ಬೆಳವಣಿಗೆಗಾಗಿ ಬೃಹತ್ ಮುಕ್ತ ಆನ್ ಲೈನ್ ಕೋರ್ಸಿನ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದ ಸದುಪಯೋಗವನ್ನು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು ಜೆ ತಿಳಿಸಿದರು.ಕಾರ್ಯಕ್ರಮದಲ್ಲಿ
ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ಡಾ. ಕುಸುಮಾಧರ ಎಸ್ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಶಿಕ್ಷಕರ ವೃತ್ತಿಪರ ಬೆಳವಣಿಗೆಗಾಗಿ ಇರುವ ಅಗತ್ಯ ಕೋರ್ಸುಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಅದೇ ರೀತಿ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರೊ. ಆದರ್ಶ ಡಿ ಇವರು ‘ ಈ ಆನ್ಲೈನ್ ಕೋಸುಗಳಿಗೆ ವಿದ್ಯಾರ್ಥಿಗಳು ಯಾವ ರೀತಿ ಸೇರ್ಪಡೆಗೊಳ್ಳಬೇಕು ‘ ಎಂಬುದರ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ‘ ಪ್ರತಿ ವಿದ್ಯಾರ್ಥಿಗೂ ಇದು ತುಂಬಾ ಅವಶ್ಯಕವಾದದು. ಇದರಲ್ಲಿ ಯಾವುದಾದರೂ ಒಂದು ಕೋರ್ಸ್ ನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಲಿಯಬೇಕೆಂದು ‘ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ಕೆವಿಜಿ ಐಪಿಎಸ್ ನ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹತ್ತನೇ ತರಗತಿಯ ಅನೀಶ್ ಸ್ವಾಗತಿಸಿ, ಶಿಬಾನಿ ವಂದಿಸಿದಳು.