ಸುಳ್ಯ: ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ವಿಶಾಲವಾದ ಪರದೆಯ 5 ಮಲ್ಟಿಮೀಡಿಯ ತರಗತಿಗಳು ಉದ್ಘಾಟನೆಗೊಂಡಿತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ. ವಿ ಮಾತನಾಡಿ “ಮಲ್ಟಿಮೀಡಿಯಾ ತರಗತಿಯು ಪಠ್ಯ, ಚಿತ್ರ, ಶ್ರವ್ಯ, ದೃಶ್ಯ, ಅನುಕರಣ ಚಿತ್ರಗಳ ಸಮ್ಮಿಶ್ರಣವನ್ನು ಒಳಗೊಂಡು ವಿದ್ಯಾರ್ಥಿಗಳಿಗೆ ವಿಷಯವನ್ನು ಸುಲಭವಾಗಿ
ಅರ್ಥೈಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ. ಮಾತನಾಡಿ ಮಕ್ಕಳ ಬೌದ್ಧಿಕ ಹಾಗು ಶೈಕ್ಷಣಿಕ ಬೆಳವಣಿಗೆಗೆ ಬೇಕಾದ ಎಲ್ಲಾ ಅವಕಾಶಗಳನ್ನು ಕಲ್ಪಿಸಲಾಗಿದೆ. ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಮಲ್ಟಿಮೀಡಿಯಾ ತರಗತಿಗಳ ಮೂಲಕ ವಿದ್ಯಾರ್ಥಿಗಳಿಗೆ ಕಲಿತ ವಿಷಯ ಬಹು ದಿನಗಳ ಕಾಲ ನೆನಪಿನಲ್ಲಿದ್ದು, ನೈಜ ಮೂರ್ತ ಕಲ್ಪನೆಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುತ್ತದೆ” ಎಂದು ಹೇಳಿದರು.
ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್” ಈ ಮಲ್ಟಿಮೀಡಿಯಾ ತರಗತಿಯಿಂದ ವಿದ್ಯಾರ್ಥಿಗಳಿಗೆ ವ್ಯಾಪಾರ ಮತ್ತು ವಾಣಿಜ್ಯ , ಮನರಂಜನ , ಸಂಪರ್ಕ ಸಂವಹನ , ಪ್ರವಾಸ, ಆರೋಗ್ಯ ಮುಂತಾದ ಕ್ಷೇತ್ರಗಳ ಸಂಕ್ಷಿಪ್ತ ಪರಿಚಯವನ್ನು ಮಾಡಿಕೊಳ್ಳಬಹುದು. ಇಲ್ಲಿ ಸ್ಮಾರ್ಟ್ ಬೋರ್ಡ್, ಕಂಪ್ಯೂಟರ್ ಆಧಾರಿತ ಶಿಕ್ಷಣ, ಉತ್ತಮ ಗ್ರಂಥಾಲಯಗಳ ಬೋಧನಾ ಪ್ರಕ್ರಿಯೆಗೆ ಹೆಚ್ಚು ಒತ್ತು ನೀಡಲಾಗುತ್ತದೆ ” ಎಂದು ತಿಳಿಸಿದರು. ಶಿಕ್ಷಕಿ ಸುಜಾತ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅಮರ ಜ್ಯೋತಿ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ, ಉಪ ಪ್ರಾಂಶುಪಾಲ ದೀಪಕ್ ವೈ, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ. ಸುರೇಶ್ ವಿ, ಕೆವಿಜಿ ಐಟಿಐ ಕಾಲೇಜಿನ ಪ್ರಾಂಶುಪಾಲ ಚಿದಾನಂದ ಬಾಳಿಲ, ಉಪ ಪ್ರಾಂಶುಪಾಲ ದಿನೇಶ್ ಮಡ್ತಿಲ, ಆಡಳಿತ ಮಂಡಳಿಯ ಸದಸ್ಯರಾದ ಭವಾನಿ ಶಂಕರ ಆಡ್ತಲೆ, ಮಾಧವ ಬಿ. ಟಿ, ಪ್ರಸನ್ನ ಕಲ್ಲಾಜೆ, ಅರುಣ್ ಕುರುಂಜಿ,ಶಿಕ್ಷಕ ಮತ್ತು ಶಿಕ್ಷಕೇತರವೃಂದದವರು ಉಪಸ್ಥಿತರಿದ್ದರು.