ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಓಣಂ ಮತ್ತು ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಯಿತು. ಶಾಲೆಯ ಪ್ರಾಂಶುಪಾಲ ಅನೀಶ್ನಾದ್ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿನಿಯರಾದ
ದ್ವಿತ ರಂಜನ್ ಮತ್ತು ಅನುಶ್ರೀ ಎರಡೂ ಹಬ್ಬಗಳ ಮಹತ್ವವನ್ನು ವಿವರಿಸಿದರು.ಸಮಾರಂಭದಲ್ಲಿ ಶಾಲಾ ಪ್ರಾಂಶುಪಾಲ ಅನೀಶ್ ನಾದ್,ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸಮೃದ್ಧಿ, ಜನ್ಯ,ಬೃಂದಾ ಮತ್ತು ಅಮ್ನ ಫಾತಿಮಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.









