ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ 9 ಮತ್ತು 10ನೆಯ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.
ವೇದಿಕೆಯಲ್ಲಿ ಪ್ರಾಂಶುಪಾಲ ಅರುಣ್ ಕುಮಾರ್ ಕೇಂದ್ರೀಯ ಪಠ್ಯಕ್ರಮದಲ್ಲಿ ಆಗುತ್ತಿರುವ ಬದಲಾವಣೆ ಮತ್ತು
ವಿದ್ಯಾರ್ಥಿಗಳು ಯಾವ ರೀತಿ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಮಾಡಬೇಕು ಎಂಬುದರ ಬಗ್ಗೆ ತಿಳಿಸಿದರು. ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಸ್ವಾಗತಿಸಿದರು. ಪೋಷಕರು ಸಭೆಯಲ್ಲಿ ತಮ್ಮ ಸಲಹೆ ಸೂಚನೆಗಳನ್ನು ನೀಡಿ ವಿದ್ಯಾರ್ಥಿಗಳ ಪ್ರಗತಿಯ ಕುರಿತು ಪರಿಶೀಲಿಸಿ ಚರ್ಚಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.