ಸುಳ್ಯ: ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ಶಿಕ್ಷಕ ಮತ್ತು ಪೋಷಕರ ಸಭೆಯನ್ನು ಶಾಲಾ ಅಡಿಟೋರಿಯಂ ನಲ್ಲಿ ಮೇ.27 ರಂದು ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಶುಭ ಕೋರಿದರು. ಈ ಕಾರ್ಯಕ್ರಮಕ್ಕೆ ಶಾಲೆಯ ಮುಖ್ಯಕಾರ್ಯನಿರ್ವಹಣಾಧಿ ಕಾರಿ ಡಾ. ಉಜ್ವಲ್ ಯು.ಜೆ ಮಾತನಾಡಿ ‘ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರ ಮತ್ತು
ಪೋಷಕರ ಶ್ರಮ ಅತಿ ಅಗತ್ಯ. ಆದುದರಿಂದ ಶಿಕ್ಷಕರ ಜೊತೆಗೆ ಪೋಷಕರು ಸಹ ಮಕ್ಕಳ ಪಾಠ ಯೋಜನೆಯ ಬಗ್ಗೆ ತಿಳಿದು ಅವರಿಗೆ ಪ್ರೋತ್ಸಾಹ ನೀಡಬೇಕು ಜೊತೆಗೆ 2023-24ನೇ ಸಾಲಿನಲ್ಲಿರುವ ವಿವಿಧ ಚಟುವಟಿಕೆಗಳ ಬಗ್ಗೆ ತಿಳಿಸಿ, ಪ್ರತಿ ವಿದ್ಯಾರ್ಥಿಗಳು ಕೂಡ ಪ್ರತಿಯೊಂದು ಚಟುವಟಿಕೆಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು. ಬಳಿಕ ಶಾಲಾ ಪ್ರಾಂಶುಪಾಲರಾದ ಅರುಣ್ ಕುಮಾರ್ ತಮ್ಮ ಮಾತುಗಳಲ್ಲಿ ಎಲ್ಲಾ ಶಿಕ್ಷಕ ವೃಂದದವರನ್ನು ಪೋಷಕರಿಗೆ ಪರಿಚಯಿಸಿ ‘ವಿದ್ಯಾರ್ಥಿಗಳು ಪರೀಕ್ಷೆಗೆ ಯಾವ ರೀತಿ ತಯಾರಿ ನಡೆಸಬೇಕು, ಅದನ್ನು ಪೋಷಕರು ಯಾವ ರೀತಿ ಗಮನಿಸುತ್ತಿರಬೇಕು ಎಂಬುದಾಗಿ ಮನದಟ್ಟು ಮಾಡಿ , ಹೊಸ ಶೈಕ್ಷಣಿಕ ವರ್ಷದ ಆಡಳಿತ ವೈಖರಿಯ ಬಗ್ಗೆ ತಿಳಿಸಿ, ಬಂದಿರುವ ಎಲ್ಲರಿಗೂ ವಂದಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಪೋಷಕ ವೃಂದ, ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.