ಸುಳ್ಯ: ಕೆ.ವಿ.ಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಜೂ.1ರಂದು ಆರಂಭಗೊಂಡಿತು. ಎಲ್.ಕೆ.ಜಿಯಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಸಂತೋಷ, ಸಂಭ್ರಮದಿಂದ ಶಾಲೆಗೆ ಆಗಮಿಸಿದರು. ಇವರನ್ನು 9, 10ನೇ ತರಗತಿಯ ವಿದ್ಯಾರ್ಥಿಗಳು, ಪ್ರಾಂಶುಪಾಲರಾದ ಅರುಣ್ ಕುಮಾರ್, ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಶಿಕ್ಷಕ ಮತ್ತು
ಶಿಕ್ಷಕೇತರ ವೃಂದದವರು ಬರಮಾಡಿಕೊಂಡರು. ಈ ಸಂದಭದಲ್ಲಿ ಮಾತನಾಡಿದ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ʻಶಾಲೆ ಎನ್ನುವ ದೇಗುಲದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಬೆಳಗುತ್ತಿರಬೇಕು. ಯಾವುದೇ ವಿದ್ಯಾರ್ಥಿಯು ಆಲಸ್ಯ ಮಾಡದೇ ಪ್ರತಿ ದಿನದ ಕೆಲಸವನ್ನು ಅವತ್ತೇ ಮುಗಿಸಿ ಉತ್ತಮ ಅಂಕಗಳನ್ನು ಪಡೆಯಬೇಕುʼ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ.ವಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಶಿಕ್ಷಕ, ಶಿಕ್ಷಕೇತರ ವೃಂದ ಮತ್ತು ಪೋಷಕರು ಉಪಸ್ಥಿತರಿದ್ದರು.