ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ 2024-25ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಶಾಲಾ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ.ವಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿದ್ದ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ. ಮಾತನಾಡಿ’ಯಾವಾಗಲೂ
ಧನಾತ್ಮಕವಾಗಿ ಯೋಚಿಸಿ , ಸತತ ಪ್ರಯತ್ನ ಮಾಡಿ. ಸತತ ಪ್ರಯತ್ನವೇ ನಮ್ಮ ಅಭಿವೃದ್ಧಿಗೆ ದಾರಿ ಎಂದು ಹೇಳಿದರು.ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಮಾತನಾಡಿದರು.ಶಾಲಾ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಶಿಕ್ಷಕಿಯರಾದ ಭವ್ಯ ಅಟ್ಲೂರು, ಹೇಮಾ ವೈಲಾಯ ಮತ್ತು ಲಲಿತಾ ಭಟ್ ಶುಭ ಹಾರೈಸಿದರು. ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು.

ಶಿಕ್ಷಕಿಯರಾದ ರೇಷ್ಮಾ ಭಟ್ ಮತ್ತು ನೀಲವೇಣಿ ಪ್ರಾರ್ಥನೆ ಹಾಡಿದರು. ಬಳಿಕ ವಿದ್ಯಾರ್ಥಿಗಳಿಗೆ ಹಲವು ಮನೋರಂಜನಾತ್ಮಕ ಆಟಗಳನ್ನು ಏರ್ಪಡಿಸಲಾಯಿತು. ಶಾಲಾ ಶೈಕ್ಷಣಿಕ ಸಂಯೋಜನಾಧಿಕಾರಿ ರೇಣುಕಾ ಉತ್ತಪ್ಪ ನಿರೂಪಿಸಿ ಭವ್ಯ ಕೆ ವಂದಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಟಲ್ ಬ್ಯಾಡ್ಮಿಂಟನ್ ಕೋರ್ಟ್ ನ್ನು ಕೆವಿಜಿ ಡೆಂಟಲ್ ಕಾಲೇಜಿನ ನಿರ್ದೇಶಕರಾದ ಮೌರ್ಯ ಆರ್ ಕುರಂಜಿ ಉದ್ಘಾಟಿಸಿದರು.