ಸುಳ್ಯ:ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ಈ ಪ್ರಯುಕ್ತ ಸಾಂಸ್ಕೃತಿಕ ಸಂಭ್ರಮ ನಡೆಯಿತು. ಕನ್ನಡಾಂಬೆಗೆ ನಮನ ಸಲ್ಲಿಸಲಾಯಿತು. ಪ್ರಾಂಶುಪಾಲ ಅನಿಶ್ ನಾದ್ ಮಾತನಾಡಿ ಕನ್ನಡ ಭಾಷೆಯ ಮಹತ್ವ, ನಾಡಿನ ಸಂಸ್ಕೃತಿ ಮತ್ತು
ಪರಂಪರೆಯನ್ನು ಉಳಿಸಿ ಬೆಳೆಸುವ ಅಗತ್ಯವನ್ನು ಒತ್ತಿಹೇಳಿದರು.
ಏಳನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಕನ್ನಡ ರಾಜ್ಯೋತ್ಸವದ ಪ್ರತಿಜ್ಞಾವಿಧಿ ಬೋಧಿಸಿದರು, ಆಕಾಂಕ್ಷ ರಾಜ್ಯೋತ್ಸವದ ವಿಶೇಷತೆ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಭರತನಾಟ್ಯ, ಯಕ್ಷಗಾನ, ಕೋಲಾಟ ಮತ್ತು ಹುಲಿವೇಷ ನೃತ್ಯ ಪ್ರದರ್ಶನ ನಡೆಯಿತು. 7ನೇ ತರಗತಿಯ ಅನರ್ಘ್ಯ ಬಿ.ಎಸ್. ಮತ್ತು ದೈವಿಕ್ ಚಾಂದ್ ಅವರು ನಿರೂಪಿಸಿದರು. ಶಿಕ್ಷಕರಾದ ಧನರಾಜ್ ಮತ್ತು ಸೌಮ್ಯ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದರು.ಉಪಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.











