ಸುಳ್ಯ:ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ನ.19 ಮತ್ತು 20 ರಂದು ವಾರ್ಷಿಕ ಕ್ರೀಡಾಕೂಟ ನಡೆಯಲಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ‘ಕಮಿಟಿ ಬಿ’ ಅಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ಕ್ರೀಡಾಕೂಟವನ್ನು ಉದ್ಘಾಟಿಸುವರು. ಕೆವಿಪಿ ಐಪಿಎಸ್ನ

ಪ್ರಾಂಶುಪಾಲರಾದ ಅನೀಶ್ನಾದ್ ಇ.ಎಂ. ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಬಾಲಚಂದ್ರ ಗೌಡ.ಬಿ ಭಾಗವಹಿಸಲಿದ್ದಾರೆ. ಕೆವಿಜಿ ಮೈದಾನದಲ್ಲಿ ನಡೆಯುವ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟ ‘ಪ್ಲೇ ಎಕ್ಸೈಟ್’ನಲ್ಲಿ ಕೆವಿಜಿ ಐಪಿಎಸ್ನ ವಿದ್ಯಾರ್ಥಿಗಳಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.















