ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಗೆ ಬರುವ ದಾರಿಯೂ ಹೊಂಡ- ಗುಂಡಿಗಳಿಂದ ತುಂಬಿ ಹೋಗಿತ್ತು.ಇದರಿಂದ ಶಾಲೆಗೆ ಬರುವ ಮಕ್ಕಳಿಗೆ, ಪೋಷಕರಿಗೆ ಮತ್ತು ಅದೇ ದಾರಿಯಲ್ಲಿ ಸಂಚರಿಸುವ ಹಲವಾರು ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ
ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್, ಉಪ ಪ್ರಾಂಶುಪಾಲೆ ಶಿಲ್ಪಾ ಬಿದ್ದಪ್ಪ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಶ್ರಮಸೇವೆಗೆ ಮುಂದಾದರು. ಅದಕ್ಕಾಗಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ರಸ್ತೆಯನ್ನು ಸರಿಪಡಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾದರು . ಶಾಲಾ ಸಾರಿಗೆ ಉಸ್ತುವಾರಿ ಮುದ್ದಪ್ಪರವರು ಹಾಗೂ ಚಾಲಕರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಮಾಡಿದ ಈ ಸಾಧನೆಯಿಂದ ಈ ರಸ್ತೆಯಲ್ಲಿ ಸಂಚರಿಸುವ ಎಲ್ಲರಿಗೂ ತುಂಬಾ ಅನುಕೂಲವಾಯಿತು. ಆದುದರಿಂದ ಶಾಲೆಯ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಮತ್ತು ಪೋಷಕ ವರ್ಗದವರು ಅಭಿನಂದಿಸಿದರು.