ಸುಳ್ತ: ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಸೆ.5ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ, ದೀಪ ಪ್ರಜ್ವಲಿಸುವುದರ ಮೂಲಕ
ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್, 10ನೇ ತರಗತಿಯ ವಿದ್ಯಾರ್ಥಿ ನವೀನ್ ಶಿಕ್ಷಕರ ದಿನಾಚರಣೆಯ ಕುರಿತು ಮಾತನಾಡಿದರು. ಹತ್ತನೇ ತರಗತಿಯ ರಿಮಾ ಫಾತಿಮಾ ಮತ್ತು ಯಶಸ್ವಿ ನಿರೂಪಿಸಿದರು. ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ದವರು ಉಪಸ್ಥಿತರಿದ್ದರು.