ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಮಹಿಳಾ ದಿನಾಚರಣೆ ನಡೆಯಿತು.ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಉದ್ಘಾಟಿಸಿ ಮಾತನಾಡಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ
ಸಾಧನೆ ಮಾಡಿ ತಮ್ಮನ್ನುಗುರುತಿಸಿಕೊಳ್ಳುವಂತಾಗಬೇಕು. ಸಮಾಜದಲ್ಲಿ ಸಮಾನ ಸ್ಥಾನವನ್ನು ಪಡೆಯಬೇಕು ಎಂದು ಹೇಳಿದರು.
ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಎಸ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಹಿರಿಯ ಶಿಕ್ಷಕಿಯಾದ ಹೇಮಾ ವೈಲಾಯ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ನಿರೂಪಿಸಿದರು. ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರವೃಂದದವರು ಉಪಸ್ಥಿತರಿದ್ದರು. ಬಳಿಕ ಶಾಲಾ ಎಲ್ಲಾ ಮಹಿಳಾ ಸಿಬ್ಬಂದಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿಜೇತರಿಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಬಹುಮಾನ ವಿತರಿಸಿದರು.