ಸುಳ್ಯ:ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನುಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕೆವಿಜಿ ಐಟಿಐ ಕಾಲೇಜಿನ ಪ್ರಾಂಶುಪಾಲ ದಿನೇಶ್ ಮಡ್ತಿಲ ಉದ್ಘಾಟಿಸಿ ಯೋಗದ
ಮಹತ್ವವನ್ನು ವಿವರಿಸಿದರು. ಶಾಲಾ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಮಾತನಾಡಿ, ಯೋಗವು ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ಆರೋಗ್ಯಕರ ಜೀವನಶೈಲಿಗೆ ದಾರಿದೀಪವಾಗಿದೆ ಎಂದು ತಿಳಿಸಿದರು.ಈ ದಿನದ ವಿಶೇಷತೆಯ ಕುರಿತು 8ನೇ ತರಗತಿಯ

ವಿದ್ಯಾರ್ಥಿ ವಿಹಾನ್ ಭಾಷಣ ಮಾತನಾಡಿದರು. ಯೋಗ ಶಿಕ್ಷಕ ಸಂತೋಷ್ ಮುಂಡಕಜೆ
ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ನೀಡಿ, ಅವುಗಳ ಆರೋಗ್ಯಕರ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸಮೃದ್ಧಿ ನಿರೂಪಿಸಿ ಮಾನ್ವಿ ವಂದಿಸಿದರು . ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.







