ಸುಳ್ಯ:ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ 2024-25ನೇ ಶೈಕ್ಷಣಿಕ ವರ್ಷವು ಸೆ.30ರಂದು ಪ್ರಾರಂಭವಾಗಿದ್ದು, ಪ್ರಥಮ ವರ್ಷದ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ.ವಿ. ಚಿದಾನಂದ ಅವರು ವಹಿಸಿ ಕಾನೂನು ಶಿಕ್ಷಣದ ಮಹತ್ವಗಳು ಮತ್ತು
ಮುಂದಿನ ಅವಕಾಶಗಳ ಬಗ್ಗೆ ತಿಳಿಸಿದರು.ವೇದಿಕೆಯಲ್ಲಿ ಎ.ಓ.ಎಲ್.ಇ ಉಪಾಧ್ಯಕ್ಷೆ ಶೋಭಾ ಚಿದಾನಂದ, ಎ.ಓ.ಎಲ್.ಇ ಸದಸ್ಯರಾದ ಜಗದೀಶ್ ಅಡ್ತಲೆ, ನೆಹರು ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಕೆ.ವಿ.ಜಿ. ಕಾನೂನು ಕಾಲೇಜಿನ ಸಲಹೆಗಾರರಾದ ಹೇಮನಾಥ್ ಕೆ.ವಿ. ಕಾನೂನು ಕಾಲೇಜಿನ ಆಡಳಿತಾಧಿಕಾರಿ ಫ್ರೊ. ದಾಮೋದರ ಗೌಡ ಶುಭಹಾರೈಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಟೀನಾ. ಹೆಚ್. ಎಸ್. ಕಾಲೇಜಿನ ಬಗ್ಗೆ ಮಾಹಿತಿ ನೀಡಿದರು.
ವಿದ್ಯಾರ್ಥಿನಿಯರಾದ ಸುಶ್ಮಿತಾ ಬಿ.ಎಮ್, ರಮ್ಯ. ಕೆ.ಎಮ್ ಮತ್ತು ಚಂದನಾ. ಪಿ.ಎಸ್. ಪ್ರಾರ್ಥಿಸಿದರು. ಕಾಲೇಜಿನ ಉಪನ್ಯಾಸಕಿ ಕಲಾವತಿ. ಎಮ್. ಸ್ವಾಗತಿಸಿದರು. ಉಪನ್ಯಾಸಕಿ ರಶ್ಮಿ.ಹೆಚ್ ವಂದಿಸಿದರು. ಉಪನ್ಯಾಸಕಿ ಉಷಾ. ಸಿ. ಶೆಟ್ಟಿ. ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರು, ಬೋದಕ, ಬೋದಕೇತರ ವೃಂದದವರು ಉಪಸ್ಥಿತರಿದ್ದರು.