ಸುಳ್ಯ:ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಅಂತರಾಷ್ಟೀಯ ಯೋಗ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿದ್ದ ವಿದುಷಿ ಮಂಜುಶ್ರೀ ರಾಘವ್ ಮಾತನಾಡಿ, ಮನುಷ್ಯನ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಲು
ಯೋಗಾಭ್ಯಾಸವು ತುಂಬಾ ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ.ಬಿ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಹೆಚ್.ಎಸ್, ಗ್ರಂಥಪಾಲಕರಾದ ವಸಂತ ಕುಮಾರ್. ಕೆ.ಎಂ. ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಸುಶ್ಮಿತಾ ಬಿ.ಎಂ, ರಮ್ಯ. ಕೆ.ಎಂ ಪ್ರಾರ್ಥಿಸಿ, ವಿದ್ಯಾರ್ಥಿನಿ ಕೀರ್ತನಾ.ಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಬೋದಕ, ಬೋದಕೇತರ ವೃಂದದವರು ಭಾಗವಹಿಸಿದ್ದರು.