ಸುಳ್ಯ:ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಮಹಿಳಾ ಸಬಲೀಕರಣ ಘಟಕ, ಐಕ್ಯೂಎಸಿ , ಎನ್ನೆಸ್ಸೆಸ್ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಆಶ್ರಯದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಅವುಗಳಿಗೆ ಪರಿಹಾರ ಮಾರ್ಗಗಳನ್ನು ತಿಳಿಸುವ ಉದ್ದೇಶದಿಂದ ‘ಮಹಿಳಾ ದೌರ್ಜನ್ಯ ಮತ್ತು ಪರಿಹಾರಗಳು’ಎಂಬ ವಿಷಯದ ಕುರಿತು
ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ಕ್ರಷ್ಣಪ್ರಸಾದ್ ನಡ್ಸಾರ್ ಭಾಗವಹಿಸಿ ಮಹಿಳೆಯರ ಮೇಲೆ ನಡೆಯುವ ವಿವಿಧ ರೀತಿಯ ದೌರ್ಜನ್ಯಗಳು, ಅವುಗಳಿಗೆ ಸಂಬಂಧಿಸಿದ ಕಾನೂನುಗಳು ಮತ್ತು ಮಹಿಳೆಯರು ಪಡೆಯಬಹುದಾದ ನ್ಯಾಯ ಹಾಗೂ ರಕ್ಷಣಾ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಅಣ್ಣಯ್ಯ ಕೆ ವಹಿಸಿದ್ದರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಹರೀಶ್ ಕುಮಾರ್, ಮಹಿಳಾ ಸಬಲೀಕರಣ ಘಟಕದ ಸಂಚಾಲಕಿ ಬಿಂದು ಕೆ.ವಿ, ಐ.ಕ್ಯೂ.ಎ.ಸಿ ಸಂಚಾಲಕ ವಿವೇಕ್ ಪಿ ಉಪಸ್ಥಿತರಿದ್ದರು.
ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಅನಿಸಿಕೆ ವ್ಯಕ್ತಪಡಿಸಿದರು. ಉಪನ್ಯಾಸಕಿ ಪ್ರಜ್ಞಾ ಕೆ.ಆರ್ ಸ್ವಾಗತಿಸಿದರು. ರಶ್ಮಿ ಎನ್.ಆರ್ ಕಾರ್ಯಕ್ರಮವನ್ನು ನಿರೂಪಿಸಿದರು. ಜಯಮಣಿ ಐ.ಬಿ ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.









