ಸುಳ್ಯ:ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಶ್ರೀಧರ್ ಎಂ.ಕೆ ಅಧ್ಯಕ್ಷತೆ ವಹಿಸಿ, ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ
ಭಾವಚಿತ್ರದ ಎದುರು ದೀಪ ಬೆಳಗಿಸಿ, ಪುಷ್ಪಾರ್ಚನೆ ಮಾಡಿದರು. ಉಪ ಪ್ರಾಂಶುಪಾಲ ಅಣ್ಣಯ್ಯ ಕೆ ಎನ್.ಎಸ್.ಎಸ್.
ಕಾರ್ಯಕ್ರಮಾಧಿಕಾರಿಗಳಾದ ಚಂದ್ರಶೇಖರ ಬಿಳಿನೆಲೆ ಮತ್ತು ಸುನಿಲ್ ಕುಮಾರ್ ಎನ್.ಪಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಎನ್ಎಸ್ಎಸ್ ಘಟಕದ ನಾಯಕರಾದ ಗೌತಮ್, ಪ್ರಣಮ್, ದೀಕ್ಷಿತಾ ಹಾಗೂ ಅಪೂರ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ವಯಂ ಸೇವಕಿ ದಿಲಾನ್ ಶಿಕ್ಷಕರ ದಿನಾಚರಣೆಯ ಬಗ್ಗೆ ಮಾತನಾಡಿ ಅಭಿನಂದನೆ ಸಲ್ಲಿಸಿದರು. ಶಿಕ್ಷಕರಿಗೆ ಸ್ಮರಣಿಕೆ ನೀಡಿ, ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.
ಸ್ವಯಂಸೇವಕ ತೇಜಸ್ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ರಕ್ಷಿತಾ ಸ್ವಾಗತಿಸಿ ಜೇಷ್ಮಾ ವಂದಿಸಿದರು .ಅಪೂರ್ವ ಕಾರ್ಯಕ್ರಮ ನಿರೂಪಿಸಿದರು.