ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ನಡೆಯಿತು. ಎ.ಒ.ಎಲ್.ಇ. ಕಮಿಟಿ “ಬಿ”ಯ ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಸಂಸ್ಥೆಯ
ಪ್ರಾಂಶುಪಾಲ ಅಣ್ಣಯ್ಯ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ನ ಸಿವಿಲ್ ವಿಭಾಗದ ಮುಖ್ಯಸ್ಥ ಡಾ. ಚಂದ್ರಶೇಖರ ಎ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಸಮಾರಂಭದಲ್ಲಿ ಉಪಪ್ರಾಂಶುಪಾಲ ಹರೀಶ್ ಕುಮಾರ್ ಪಿ., ಕ್ರೀಡಾ ಸಂಯೋಜಕ ಅಣ್ಣಪ್ಪ ಜಿ.ಕೆ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರಭುಲಿಂಗ ಡಿ.ಹೆಚ್. ಹಾಗೂ ಕಚೇರಿ ಅಧೀಕ್ಷಕ ಶಿವರಾಮ ಕೇರ್ಪಳ ಉಪಸ್ಥಿತರಿದ್ದರು.
ವಿದ್ಯಾರ್ಥಿ ಪ್ರತಿನಿಧಿ ಜಬೀರ್ ಸ್ವಾಗತಿಸಿದರು. ಕ್ರೀಡಾ ಕಾರ್ಯದರ್ಶಿ ಮನ್ವಿತ್ ಆಳ್ವ ಕ್ರೀಡಾ ಪ್ರಮಾಣವಚನ ಬೋಧಿಸಿದರು. ಚಂದ್ರಶೇಖರ ಬಿಳಿನೆಲೆ ಕಾರ್ಯಕ್ರಮ ನಿರೂಪಿಸಿದರು. ದೀವಿತಾ ಕೆ.ವೈ. ಅವರು ವಂದನಾರ್ಪಣೆ ಮಾಡಿದರು.
ಕ್ರೀಡಾಕೂಟದ ನಿರ್ವಹಣೆಗೆ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಜಯಚಂದ್ರ, ತೀರ್ಥವರ್ಣ, ಆಶಾ ಜ್ಯೋತಿ ಹಾಗೂ ಅಕ್ಷತಾ ಸಹಕರಿಸಿದರು.









