ಸುಳ್ಯ: ಶೈಕ್ಷಣಿಕ ಉನ್ನತಿಗೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಲು ವಿದ್ಯಾಸಂಸ್ಥೆಗಳ ವಿದ್ಯಾರ್ಥಿ ಸಂಘಗಳು ಅಡಿಗಲ್ಲು. ಆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ವಿದ್ಯಾರ್ಥಿ ಪರಿಷತ್ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ಆಕಾಡೆಮಿ ಆಪ್ ಲಿಬರಲ್ ಎಜ್ಯುಕೇಷನ್ ‘ಕಮಿಟಿ ಬಿ’ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯದ ಕಾರ್ಯಕಾರಿ ಸಮಿತಿ ಸದಸ್ಯರಾದ ಡಾ.ಉಜ್ವಲ್ ಯು.ಜೆ. ಹೇಳಿದ್ದಾರೆ. ಅಮರಶ್ರೀಭಾಗ್ನ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ
ವಿದ್ಯಾರ್ಥಿ ಪರಿಷತ್ನ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತಾನಡಿದರು.ವಿದ್ಯಾರ್ಥಿ ಪರಿಷತ್ ಸಾಮಾಜಿಕ ಜವಾಬ್ದಾರಿ ಅರಿತು ವಿದ್ಯಾರ್ಥಿಗಳ ಹಾಗೂ ಶಿಕ್ಷಣ ಸಂಸ್ಥೆಯ ಉನ್ನತಿಗಾಗಿ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುರೇಶ್ ವಿ. ಮಾತನಾಡಿ ವಿದ್ಯಾರ್ಥಿ ಪರಿಷತ್ ವತಿಯಿಂದ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ, ಎಲ್ಲರಿಗೂ ಪ್ರಯೋಜನಕಾರಿಯಾದ ಕಾರ್ಯಕ್ರಮಗಳನ್ನು ರೂಪಿಸಿ ಎಂದರು.
ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಧರ ಎಂ.ಕೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ರಂಗಸ್ವಾಮಿ ವಿದ್ಯಾರ್ಥಿ ಪರಿಷತ್ನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ವಿದ್ಯಾರ್ಥಿ ಪರಿಷತ್ನ ಅಧ್ಯಕ್ಷ ಯಶ್ವಿನ್ ಮಾತನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ, ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರಜ್ಞಾ ಕೆ.ಆರ್, ವಿದ್ಯಾರ್ಥಿ ಪರಿಷತ್ನ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಧ್ಯಾ ಮತ್ತು ಬಳಗದವರು ಸ್ವಾಗತಿಸಿದರು. ವಿದ್ಯಾರ್ಥಿ ಪರಿಷತ್ನ ಕಾರ್ಯದರ್ಶಿ ಧನುಷ್ ಎ ಸ್ವಾಗತಿಸಿ, ಜತೆ ಕಾರ್ಯದರ್ಶಿ ದೀಕ್ಷಿತಾ ವಂದಿಸಿದರು. ಸುನಿಲ್ ಕುಮಾರ್ ಎನ್.ಪಿ ಸಂದೇಶ ವಾಚಿಸಿದರು. ಚಂದ್ರಶೇಖರ ಬಿಳಿನೆಲೆ ಕಾರ್ಯಕ್ರಮ ನಿರೂಪಿಸಿದರು.