ಸುಳ್ಯ: ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಎಒಎಲ್ಇ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ 13ನೇ ಪುಣ್ಯಸ್ಮರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮವು ದೀಪ ಪ್ರಜ್ವಲನೆ ಹಾಗೂ ಡಾ. ಕುರುಂಜಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆರಂಭವಾಯಿತು.ಈ ಸಂದರ್ಭದಲ್ಲಿ ಮಾತನಾಡಿದ
ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋಧಾ ರಾಮಚಂದ್ರ ‘ಡಾ. ಕುರುಂಜಿ ವೆಂಕಟ್ರಮಣ ಗೌಡರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪೂರ್ವ ಸೇವೆ, ದೂರದೃಷ್ಟಿಯ ಚಿಂತನೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಸ್ಮರಿಸಿದರು. ಶಿಕ್ಷಣದ ಮೂಲಕ ಸಮಾಜದಲ್ಲಿ ಪರಿವರ್ತನೆ ತರಬೇಕೆಂಬ ಅವರ ಕನಸು ಇಂದು ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದೆ ಎಂದು ಅವರು ಹೇಳಿದರು.ಅವರ ಸಾಧನೆಯ

ಹಿಂದೆ ಮಡದಿ ಜಾನಕಿ ವೆಂಕಟ್ರಮಣ ಗೌಡ ಅವರ ಅವಿರತ ಪರಿಶ್ರಮ, ತ್ಯಾಗ ಹಾಗೂ ನಿರಂತರ ಪ್ರೋತ್ಸಾಹವೂ ಮಹತ್ತರ ಪಾತ್ರ ವಹಿಸಿದೆ ಎಂದು ಸ್ಮರಿಸಿ ಗೌರವ ನಮನ ಸಲ್ಲಿಸಿದರು.
ಆಂಗ್ಲ ಭಾಷಾ ಉಪನ್ಯಾಸಕಿ ಮಲ್ಲಿಕಾ ಎಂ.ಎಲ್. ಕಾರ್ಯಕ್ರಮ ನಿರ್ವಹಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ದೀಪಕ್ ವೈ.ಆರ್., ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಡಾ. ಕುರುಂಜಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ನಮನ ಅರ್ಪಿಸಿದರು.












