ಸುಳ್ಯ:ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ನಲ್ಲಿ ಎ.ಒ.ಎಲ್.ಇ ಯ ಸ್ಥಾಪಕ ಅಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ 12ನೆಯ ಪುಣ್ಯತಿಥಿ ಅಂಗವಾಗಿ ನುಡಿ ನಮನ ಸಲ್ಲಿಸಲಾಯಿತು.ಎ.ಒ.ಎಲ್.ಇ ಕಮಿಟಿ” ಬಿ”ಯ ಅಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ. ವಿ .ಕಾಲೇಜಿನ
ಪ್ರಾಂಶುಪಾಲ ಅಣ್ಣಯ್ಯ ಕೆ, ಉಪ ಪ್ರಾಂಶುಪಾಲ ಹರೀಶ್ ಕುಮಾರ್ ಪಿ, ಕೆವಿಜಿ ಐಟಿಐ ಪ್ರಾಂಶುಪಾಲ ದಿನೇಶ್ ಮಡ್ತಿಲ,ಎ.ಒ.ಎಲ್.ಇ.ಕಮಿಟಿ” ಬಿ” ಯ ಆಡಳಿತಾಧಿಕಾರಿ ಭವಾನಿ ಶಂಕರ ಅಡ್ತಲೆ, ಕೆವಿಜಿ ಡೆಂಟಲ್ ಕಾಲೇಜಿನ ಆಡಳಿತಾಧಿಕಾರಿ ಮಾಧವ ಬಿ.ಟಿ , ಎಲ್ಲಾ ವಿಭಾಗ ಮುಖ್ಯಸ್ಥರುಗಳು ಸಿಬ್ಬಂದಿಗಳು ಉಪಸ್ಥಿತರಿದ್ದು ಕೆವಿಜಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.





