ಸುಳ್ಯ:ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಕಾರ್ಯ ಚಟುವಟಿಕೆಗಳನ್ನು ಮತ್ತು ಸಂಘದ ಕಾರ್ಯಕ್ರಮಗಳನ್ನು ನಡೆಸಲು ಸಂಘದ ಕಚೇರಿ ನಿರ್ಮಾಣಕ್ಕೆ ಸುಳ್ಯ ನಗರ ವ್ಯಾಪ್ತಿಯಲ್ಲಿ 10 ಸೆಂಟ್ಸ್ ನಿವೇಶನ ಒದಗಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ
ದರ್ಶನ್ ಹೆಚ್.ವಿ.ಅವರಿಗೆ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್. ಸಂಶುದ್ದೀನ್ ಮನವಿ ನೀಡಿದರು. ಮನವಿ ಹಾಗು
ಭೂಮಿ ನೀಡಲು ಕ್ರಮ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರ ಶಿಫಾರಸ್ಸು ಪತ್ರವನ್ನು ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ,ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟಿ ಮೊದಲಾದವರು ಉಪಸ್ಥಿತರಿದ್ದರು







