ಸುಳ್ಯ: ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಯೇನಾಪೋಯ ಪಿಯು ಕಾಲೇಜಿನ ನೀಟ್ ಸಂಯೋಜಕರಾದ ಡಾ. ರಾಕೇಶ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.
ವಿದ್ಯಾರ್ಥಿಗಳನ್ನು

ಉದ್ದೇಶಿತವಾಗಿ ಮಾತನಾಡಿದ ಡಾ. ರಾಕೇಶ್ ರವರು ಜೆಇಇ, ನೀಟ್, ಸಿಇಟಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಂತೆ ಮಾರ್ಗದರ್ಶನ ನೀಡಿದರು. ಭವಿಷ್ಯದಲ್ಲಿ ಉನ್ನತ ಶಿಕ್ಷಣ ಮತ್ತು ವೃತ್ತಿಜೀವನ ನಿರ್ಮಾಣಕ್ಕೆ ಈ ಪರೀಕ್ಷೆಗಳ ಮಹತ್ವವನ್ನು ವಿವರಿಸಿದರು. ಪ್ರಸ್ತುತ ವರ್ಷದ ಪರೀಕ್ಷೆಯಲ್ಲಿ ಎದುರಿಸಬೇಕಾದ ಸವಾಲುಗಳ ಬಗ್ಗೆ ಹಾಗೂ ಕಳೆದ ವರ್ಷ ಹಾಗೂ ಪ್ರಸ್ತುತ ವರ್ಷದ ಪರೀಕ್ಷೆ ವಿಧಾನದಲ್ಲಾದ ಬದಲಾವಣೆಯ ಬಗ್ಗೆ ವಿವರಿಸಿದರು. ಪರೀಕ್ಷೆಯಲ್ಲಿರುವ ವಿದ್ಯಾರ್ಥಿಗಳ ಕುರಿತ ಗೊಂದಲಕ್ಕೆ ಪರಿಹಾರ ಸೂಚಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.












