ಸುಳ್ಯ: ಕೆಪಿಸಿಸಿ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಅವರು ಬೆಂಗಳೂರಿನಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಅವರ ವಸತಿಯಲ್ಲಿ ಭೇಟಿಯಾಗಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಾಗು ಸುಳ್ಯ ತಾಲ್ಲೂಕಿನ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಚಿವರಲ್ಲಿ ಚರ್ಚೆ ನಡೆಸಲಾಗಿದೆ. ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅಧಿಕಾರಿಗಳ ಸಭೆ ನಡೆಸಬೇಕು ಎಂದು ವಿನಂತಿಸಲಾಗಿದೆ ಎಂದು ಟಿ.ಎಂ.ಶಹೀದ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮೂಸಾ ಕುಂಞಿ ಪೈಂಬಚ್ಚಾಲ್ ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









