ಸುಳ್ಯ: ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ರಾಜ್ಯ ಸದಸ್ಯರಾಗಿ ಕಾರ್ಮಿಕ ಮುಖಂಡ ಸಂಪಾಜೆ ಗ್ರಾಮದ ಕೆ.ಪಿ.ಜಾನಿ ಕಲ್ಲುಗುಂಡಿ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.ಕಾರ್ಮಿಕ ಸಚಿವರಾದ
ಸಂತೋಷ್ ಲಾಡ್ ಅವರು ಈ ಮಂಡಳಿಯ ಅಧ್ಯಕ್ಷರಾಗಿದ್ದು, ಕರ್ನಾಟಕ ಸರ್ಕಾರದ ಕಾರ್ಮಿಕ, ಇಂಧನ, ನಗರಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಒಟ್ಟು 13 ಮಂದಿ ರಾಜ್ಯದಿಂದ ಸದಸ್ಯರುಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.