ಧರ್ಮಸ್ಥಳ: ಧರ್ಮಸ್ಥಳ ಲಕ್ಷ ದೀಪೋತ್ಸವದ ಅಂಗವಾಗಿ ರಾತ್ರಿ ಕೆರೆಕಟ್ಟೆ ಉತ್ಸವ ಸಂಪನ್ನಗೊಂಡಿತು.ಸೋಮವಾರ ರಾತ್ರಿ ಲಲಿತೋದ್ಯಾನ ಉತ್ಸವ ನಡೆಯಿತು.ನ.18ರಂದು ಮಂಗಳವಾರ ಸಂಜೆ ಗಂಟೆ ಐದರಿಂದ ಸರ್ವಧರ್ಮ ಸಮ್ಮೇಳನದ 93ನೇ ಅಧಿವೇಶನ ನಡೆಯಲಿದೆ.
ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ
ಮೂಲ ಸೌಕರ್ಯಾಭಿವೃದ್ಧಿ ಇಲಾಖೆ ಸಚಿವ ಡಾ. ಬಿ.ಎಂ. ಪಾಟೀಲ್ ಸರ್ವಧರ್ಮ ಸಮ್ಮೇಳನವನ್ನು ಉದ್ಘಾಟಿಸುವರು.
ಹರಿಹರಪುರದ ಪೂಜ್ಯ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.ಪ್ರಜಾವಾಣಿ ಪತ್ರಿಕೆಯ ಮುಖ್ಯ ಉಪಸಂಪಾದಕ ಎ. ಸೂರ್ಯಪ್ರಕಾಶ್ ಪಂಡಿತ್ ಮತ್ತು ಖ್ಯಾತ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಉಪನ್ಯಾಸ ನೀಡುವರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ 8.30 ರಿಂದ ಚೆನ್ನೈನ ಶ್ರೀದೇವಿ ನೃತ್ಯಾಲಯದ ಕಲಾವಿದರಿಂದ ವಿದುಷಿ ಡಾ. ಶೀಲಾ ಉನ್ನಿಕೃಷ್ಣನ್ ನಿರ್ದೇಶನದಲ್ಲಿ ಭರತನಾಟ್ಯ ನೃತ್ಯ ಪ್ರದರ್ಶನವಿದೆ.
ರಾತ್ರಿ ಕಂಚಿಮಾರು ಕಟ್ಟೆ ಉತ್ಸವ ನಡೆಯಲಿದೆ.











