ಸುಳ್ಯ:ಚಿಂತಕ, ಸಾಮಾಜಿಕ ಹೋರಾಟಗಾರ, ಖ್ಯಾತ ವಾಗ್ಮಿ ಲಕ್ಷ್ಮೀಶ ಗಬ್ಲಡ್ಕ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಇವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಪ್ರಚಾರ
ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಜಿಲ್ಲಾ ಪ್ರಚಾರ ಸಮಿತಿ ಸಂಯೋಜಕ ರಾಜಾರಾಮ್ ಭಟ್ ಬೆಟ್ಟ ಇವರ ಸಮ್ಮುಖದಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಯ ವಕ್ತಾರ ಶ್ರೀ ಚರಣ್ ಜಿತ್ ಸಿಂಗ್ ಸಪ್ರಾ ಇವರು ಪಕ್ಷಕ್ಕೆ ಸೇರ್ಪಡೆ ಮಾಡಿದರು. ಸಂಘ ಪರಿವಾರ ಮುಖಂಡರಾಗಿದ್ದ ಲಕ್ಷ್ಮೀಶ ಗಬ್ಲಡ್ಕ ಅವರು ಇತ್ತೀಚೆಗೆ ಕೆಲವು ವರ್ಷಗಳಿಂದ ರಾಜಕೀಯವಾಗಿ ತಟಸ್ಥರಾಗಿದ್ದರು. ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮೂಲಕ ಹೊಸ ರಾಜಕೀಯ ಇನ್ನೀಂಗ್ಸ್ ಆರಂಭಿಸಿದ್ದಾರೆ.