ಸುಳ್ಯ: ತೀವ್ರ ಕುತೂಹಲ ಕೆರಳಿಸಿರುವ ಸುಳ್ಯ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದ್ದೋದ್ದೇಶ ಸಹಕಾರ ನಿಯಮಿತ (ಲ್ಯಾಂಪ್ಸ್) ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಇಂದು ನಡೆಯಲಿದೆ.ಈ ಮಧ್ಯೆ ಅಮರ ಮುಡ್ನೂರು ವಲಯ ನಿರ್ದೇಶಕಿ ನೀಲಮ್ಮ ಅವರು ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಅಧ್ಯಕ್ಷತೆಗೆ
ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನೀಲಮ್ಮ ಅವರು ನಾಮಪತ್ರ ಸಲ್ಲಿಸಿದ್ದಾರೆ. ಉಪಾಧ್ಯಕ್ಷತೆಗೆ ಪುಂಡರೀಕ ಕಾಪುಮಲೆ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ ಅವರ ಸಮ್ಮುಖದಲ್ಲಿ ನೀಲಮ್ಮ ಅವರು ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಬಳಿಕ ಅಧ್ಯಕ್ಷತೆಗೆ ನಾಮಪತ್ರ ಸಲ್ಲಿಸಿದರು.