ಹಾಸನ: ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಬಳಿ ಭೂಕುಸಿತ ಸಂಭವಿಸಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ತಡೆ ಉಂಟಾಗಿದೆ.ಬೆಂಗಳೂರಿನಿಂದ ಮಂಗಳೂರಿಗೆ
ಸಂಚರಿಸುವ ವಾಹನಗಳು ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಹಾಸನ ಜಿಲ್ಲಾಡಳಿತ ಸೂಚಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ಬರುವ ವಾಹನಗಳು ಸಂಪಾಜೆ ಮತ್ತು ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸಲು ತಿಳಿಸಿದೆ.ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ ಸಂಭವಿಸಿದೆ.
ಭೂಕುಸಿತ ಸಂಭವಿಸಿದ ಕಾರಣ ಶಿರಾಡಿ ಘಾಟ್ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು.