ಕಲ್ಲಪಳ್ಳಿ: ಸುಳ್ಯ -ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ತಡೆ ಉಂಟಾದ ಘಟನೆ ನಡೆದಿದೆ. ಕಳೆದ ಮೂರು ದಿನಗಳಿಂದ ಎಡೆ ಬಿಡದೆ ಸುರಿಯುತ್ತಿರುವ
ಮಳೆಯ ಪರಿಣಾಮ ಗಡಿ ಪ್ರದೇಶ ಕೇರಳದ ಭಾಗ ಕಲ್ಲಪಳ್ಳಿಯಲ್ಲಿ ಇಂದು ಬೆಳಿಗ್ಗೆ ಮಣ್ಣು ಕುಸಿತ ಉಂಟಾಗಿದೆ. ಇದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಬಳಿಕ ಸ್ಥಳೀಯರು ಸೇರಿ ಮಣ್ಣು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು. ಇಲ್ಲಿ ಬರೆ ಇನ್ನಷ್ಟು ಕುಸಿಯುವ ಅಪಾಯ ಇದೆ ಎಂದು ಸ್ಥಳೀಯರು ಹೇಳುತ್ತಾರೆ.