ಕಡಬ:ರಾಜ್ಯದ ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸರಕಾರ ಲ್ಯಾಪ್ಟಾಪ್ ವಿತರಿಸಲಾಗುತ್ತಿದ್ದು ಕಡಬ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ಲ್ಯಾಪ್ಟಾಪ್ ವಿತರಿಸಿದರು. ಈ ಸಂದರ್ಭದಲ್ಲಿ
ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಪಿ.ಪಿ.ವರ್ಗೀಸ್, ಗೀತಾ ಕೋಲ್ಚಾರ್, ಆದಂ ಕಡಬ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಸುಳ್ಯ ವಿಧಾನಸಭಾ ಕ್ಷೇತ್ರದ ಒಟ್ಟು 33 ಗ್ರಾಮ ಲೆಕ್ಕಾಧಿಕಾರಿಗಳಿಗೆ ಈಗಾಗಲೇ ಉಚಿತವಾಗಿ ಲ್ಯಾಪ್ಟಾಪ್ ವಿತರಣೆ ಮಾಡಲಾಗಿದೆ. ಸರಕಾರವು ರಾಜ್ಯದ ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ವಿತರಿಸಬೇಕೆಂದು ನಿರ್ಧರಿಸಿದ್ದು ಸರಕಾರಕ್ಕೆ ಮತ್ತು ಕಂದಾಯ ಸಚಿವರಿಗೆ ಅಭಿನಂದನೆಯನ್ನು ಸಲ್ಲಿಸಲಾಗುವುದು ಎಂದು ಸುಳ್ಯಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಶ್ರೀಮತಿ ಗೀತಾ ಕೋಲ್ಚಾರ್ ತಿಳಿಸಿದ್ದಾರೆ.





