ಸುಳ್ಯ: ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ , ಶಿಕ್ಷಣ ಪೌಂಡೇಶನ್ ಮತ್ತು ಡೆಲ್ ಟೆಕ್ನಲಾಜಿ ಇದರ ಸಹಾಭಾಗಿತ್ವದಲ್ಲಿ ಜಂಟಿಯಾಗಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿ ಆಯ್ಕೆಯಾದ ಸುಳ್ಯ ತಾಲೂಕಿನ ಎಂಟು ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗಳಿಗೆ ಲ್ಯಾಪ್ಟಾಪ್/ ಮಾನಿಟರ್ ಕೊಡುಗೆಯಾಗಿ
ನೀಡಲಾಯುತು. ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಹಸ್ತಾಂತರಿಸಿ ಶುಭ ಹಾರೈಸಿದರು.
ತಾಲೂಕು ಪಂಚಾಯತ್ ಇಒ ರಾಜಣ್ಣ, ಗ್ರಾಮ ಡಿಜಿ ವಿಕಸನದ ಜಿಲ್ಲಾ ಸಂಯೋಜಕ ಲವೀಶ್ ಕುಮಾರ್ ತಾಲೂಕು ಸಂಯೋಜಕ ದಿನೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಂಥಾಲಯ ಮೇಲ್ವಿಚಾರಕರು, ಗ್ರಾ.ಪಂಅಧ್ಯಕ್ಷರು, ತಾ.ಪಂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಗುತ್ತಿಗಾರು ಗ್ರಾಮ ಪಂಚಾಯತಿ ಮೇಲ್ವಿಚಾರಕರಾದ ಅಭಿಲಾಷ್ ಸ್ವಾಗತಿಸಿದರು. ಜಿಲ್ಲಾ ಸಂಯೋಜಕ ಲವೀಶ್ ಕುಮಾರ್ ನಿರೂಪಿಸಿ ವಂದಿಸಿದರು.ಅರಂತೋಡು, ಆಲೆಟ್ಟಿ,ಮಂಡೆಕೋಲು, ಸಂಪಾಜೆ, ಗುತ್ತಿಗಾರು, ದೇವಚಳ್ಳ,ಅಮರಮುಡ್ನೂರು, ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಲ್ಯಾಪ್ ಟಾಪ್ ಕೊಡುಗೆ ನೀಡಲಾಯಿತು.