ಸುಳ್ಯ: ರಾಜ್ಯದಾದ್ಯಂತ ಡೆಂಗಿ ಜ್ವರ ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ನಗರಗಳಲ್ಲಿ, ಪಟ್ಟಣ, ತಾಲೂಕು ಕೇಂದ್ರ ಹಾಗೂ ಗ್ರಾಮಗಳು ಸೇರಿ ಎಲ್ಲೆಡೆ ಲಾರ್ವಾ ಸಮೀಕ್ಷೆ ಮತ್ತು ನಾಶ ಮಾಡುವ ಕಾರ್ಯಕ್ರಮ ನಡೆಯುತಿದೆ. ಈ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಆರೋಗ್ಯ ಇಲಾಖೆಯ ನೇತೃತ್ವದಲ್ಲಿ
ವಿವಿಧ ಸಂಘ ಸಂಸ್ಥೆಗಳ ಸಹಾಕಾರದಿಂದಿಗೆ ಲಾರ್ವಾ ನಾಶ ಸಮೀಕ್ಷೆ ನಡೆಯಲಿದೆ. ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ ನೀಡಿದರು. ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ತಹಶೀಲ್ದಾರ್ ಮಂಜುನಾಥ್ ಎಂ, ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಬಿ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತ, ತಾ.ಪಂ. ವ್ಯವಸ್ಥಾಪಕ ಹರೀಶ್, ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳ ಟಿ, ಸುಪ್ರಿತ್ ಮೋಂಟಡ್ಕ, ಪ್ರಸಾದ್ ಕಾಟೂರು, ಚಂದ್ರಶೇಖರ ನೆಡಿಲು ಮತ್ತಿತರರು ಉಪಸ್ಥಿತರಿದ್ದರು. ವಿವಿಧ ಕಡೆಗಳಲ್ಲಿ ಸಮೀಕ್ಷೆ ನಡೆಸಿ ಲಾರ್ವಾ ನಾಶ ಪಡಿಸಲಾಯಿತು.