ಸುಳ್ಯ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕೆಂಪು ಕಲ್ಲು ಸಮೇತ 4 ಲಾರಿಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ ಆ.24ರಂದು 4 ಲಾರಿಗಳಲ್ಲಿ ಮುರೂರು ಕಡೆಯಿಂದ ಸುಳ್ಯ ಮಾರ್ಗವಾಗಿ ಮಡಿಕೇರಿ ಕಡೆಗೆ, ಅಕ್ರಮವಾಗಿ ಕೆಂಪುಕಲ್ಲು ಸಾಗಾಟ ಮಾಡುತ್ತಿರುವ ಬಗ್ಗೆ
ಮಾಹಿತಿ ಪಡೆದ ಸುಳ್ಯ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ ಸಂತೋಷ್ ಬಿ.ಪಿ. ಅವರು ಸಿಬ್ಬಂದಿಗಳೊಂದಿಗೆ, ಜಾಲ್ಸೂರು ಗ್ರಾಮದ ಅಡ್ಕಾರು ಬಳಿ ವಾಹನಗಳನ್ನು ತಡೆದು ಪರಿಶೀಲಿಸಿದಾಗ 4 ಲಾರಿಗಳಲ್ಲಿ ಯಾವುದೇ ಅನುಮತಿಯಿಲ್ಲದೇ, ಅಕ್ರಮವಾಗಿ ಕೆಂಪುಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿರುತ್ತದೆ. ಈ ಬಗ್ಗೆ ಮುಂದಿನ ಕ್ರಮಕ್ಕಾಗಿ 4 ಲಾರಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.ಲಾರಿಗಳ ಮೌಲ್ಯ ಅಂದಾಜು 45 ಲಕ್ಷ ಹಾಗೂ ಒಟ್ಟು 1750 ಕಲ್ಲುಗಳ ಮೌಲ್ಯ ರೂ
43,750 ಆಗಿದೆ ಎಂದು ಪೊಲೀಸ್ ಇಲಾಖೆಯ ಮಾಹಿತಿ ತಿಳಿಸಿದೆ.












