ಸುಳ್ಯ:ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಾಗೂ ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ವತಿಯಿಂದ ಅಂತರ್ ಕಾಲೇಜು ಮಹಿಳಾ ಮತ್ತು ಪುರುಷರ ಗುಡ್ಡಗಾಡು ಓಟ ಜನವರಿ 20 ರಂದು ಸುಳ್ಯದಲ್ಲಿ ನಡೆಯಿತು.ಸುಳ್ಯದಲ್ಲಿ ಪ್ರಥಮ ಬಾರಿಗೆ ನಡೆದ ಕಾನೂನು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ 26 ಕಾಲೇಜುಗಳಿಂದ 138 ಪುರುಷರು ಹಾಗೂ 89 ಮಹಿಳೆಯರು ಸೇರಿ ಒಟ್ಟು 227 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದಾರೆ. ಪುರುಷರು ಹಾಗೂ
ಮಹಿಳೆಯರಿಗೆ ಪ್ರತ್ಯೇಕ ನಡೆದ ಸ್ಪರ್ಧೆ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಆರಂಭಗೊಂಡು 10 ಕಿಲೋಮೀಟರ್ ದೂರ ಕ್ರಮಿಸಿ ಎನ್ಎಂಸಿ ಮೈದಾನದಲ್ಲಿ ಸಮಾಪನಗೊಂಡಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇ಼ನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರು ಹಸಿರು ನಿಶಾನೆ ತೋರಿ ಪುರುಷರ ವಿಭಾಗದ ಸ್ಪರ್ಧೆಗೆ ಚಾಲನೆ ನೀಡಿದರು. ಕಾರ್ಯದರ್ಶಿ ಕೆ.ವಿ.ಹೇಮನಾಥ್ ಮಹಿಳಾ ವಿಭಾಗದ ಸ್ಪರ್ಧೆಗೆ ಚಾಲನೆ ನೀಡಿದರು. ಹುಬ್ಬಳ್ಳಿ ಕರ್ನಾಟಕ ಕಾನೂನು ವಿಶ್ವ ವಿದ್ಯನಿಲಯದ ಕ್ರೀಡಾ ನಿರ್ದೇಶಕ ಡಾ.ಖಾಲಿದ್ ಖಾನ್ ,ಕೆ.ವಿ.ಜಿ.ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಉದಯಕೃಷ್ಣ.ಬಿ., ಕೆವಿಜಿ ಆಯುರ್ವೇದ ಕಾಲೇಜಿನ

ಪ್ರಾಂಶುಪಾಲರಾದ ಡಾ.ಲೀಲಾಧರ ಡಿ.ವಿ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಪ್ರೊ.ಎಂ.ಬಾಲಚಂದ್ರ ಗೌಡ, ರಾಧಾಕೃಷ್ಣ ಮಾಣಿಬೆಟ್ಟು, ಕಾನೂನು ಕಾಲೇಜಿನ ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಟೀನಾ ಎಚ್.ಎಸ್, ಅಧೀಕ್ಷಕರಾದ ಗೋಪಿನಾಥ್ ಕೆ,
ಕ್ರೀಡಾ ಸಂಯೋಜಕರಾದ ಲಕ್ಷ್ಮೀಕಾಂತ್ ಕೆ.ಎಲ್.
ದೈಹಿಕ ಶಿಕ್ಷಣ ನಿರ್ದೇಶಕರಾದ ಲೆಫ್ಟಿನೆಂಟ್ ಸೀತಾರಾಮ ಎಂ.ಡಿ., ನಾಗರಾಜ್ ನಾಯ್ಕ್, ಮಿಥನ್ ಎಸ್, ವಿವಿಧ ಕಾನೂನು ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರು, ವ್ಯವಸ್ಥಾಪಕರು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.










