ಕಲ್ಲಪ್ಪಳ್ಳಿ: ಕಾಸರಗೋಡು ಲೋಕಸಭಾ ಕ್ಷೇತ್ರದ ಎಡರಂಗದ ಅಭ್ಯರ್ಥಿ ಎಂ.ವಿ. ಬಾಲಕೃಷ್ಣ ಮಾಸ್ಟರ್ ಇಂದು ಕಲ್ಲಪಳ್ಳಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮತ ಯಾಚಿಸಿದರು. ಮುಖ್ಯ ಭಾಷಣಕಾರರಾಗಿ ಕುಂಬಳೆ ಏರಿಯಾ ಕಮಿಟಿ ಸದಸ್ಯರಾದ ಶಂಕರ್ ರೈ ಮಾಸ್ತರ್ ಭಾಗವಹಿಸಿ ಮಾತನಾಡಿದರು. ಸಂವಿಧಾನದ ಉಳಿವಿಗಾಗಿ,
ದೇಶದ ಭದ್ರತೆಗಾಗಿ, ಕೋಮು ಸೌಹಾರ್ದತೆಗಾಗಿ ಎಡರಂಗದ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ, ಸಿಪಿಎಂ ರಾಜ್ಯ ಸಮಿತಿ ಸದಸ್ಯರಾದ ರಾಜನ್, ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎಂವಿ ಕೃಷ್ಣನ್, ಏರಿಯ ಕಮಿಟ್ಟಿ ಸೆಕ್ರೆಟರಿ ಕೆ ಕೃಷ್ಣನ್, ಏರಿಯಾ ಕಮಿಟಿ ಸದಸ್ಯರಾದ ಪಿಜಿ ಮೋಹನ್, ಪಿ ತಂಬಾನ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಬೂತ್ ಸೆಕ್ರೆಟರಿ ಅರುಣ್ ರಂಗತ್ತಮಲೆ ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಕುಮಾರನ್ ವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಸನ್ನ ಪ್ರಸಾದ್, ಗ್ರಾ.ಪಂ.ಸದಸ್ಯ ರಾಧಾಕೃಷ್ಣ ಕಲ್ಲಪಳ್ಳಿ, ಬೂತ್ ಮಟ್ಟದ ಕಾರ್ಯಕರ್ತರು ಭಾಗವಹಿಸಿದ್ದರು.