ಮಂಗಳೂರು:ತೆಂಕು ತಿಟ್ಟು ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತರಾದ ಲೀಲಾವತಿ ಬೈಪಾಡಿತ್ತಾಯರು ಶನಿವಾರ ಸಂಜೆ ನಿಧನರಾದರು. ಲೀಲಾವತಿ ಬೈಪಾಡಿತ್ತಾಯರು ಸರಿ ಸುಮಾರು ನಾಲ್ಕು ದಶಕಗಳ ಕಾಲ ಭಾಗವತರಾಗಿ ಕಲಾ ಸೇವೆ ಮಾಡಿದ್ದರು.
ಲೀಲಾವತಿ ಬೈಪಾಡಿತ್ತಾಯ ಅವರಿಗೆ 2010ನೇ ಕರ್ನಾಟಕದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. 2012ರಲ್ಲಿ ಕರ್ನಾಟಕ ಸರಕಾರ ಕೊಡಮಾಡಿದ ಸಾಧಕ ಹಿರಿಯ ನಾಗರಿಕರು ಪ್ರಶಸ್ತಿ, 2023ರಲ್ಲಿ
ರಾಜ್ಯ ಸರಕಾರ ರಾಜ್ಯೋತ್ಸವ ಪ್ರಶಸ್ತಿ. ಆಳ್ವಾಸ್ ನುಡಿಸಿರಿ, ಉಳ್ಳಾಲ ಅಬ್ಬಕ್ಕ ಪ್ರಶಸ್ತಿ ಸೇರಿದಂತೆ ನೂರಾರು ಸನ್ಮಾನವನ್ನು ಪಡೆದಿದ್ದಾರೆ.
ಸುಬ್ರಹ್ಮಣ್ಯ, ಪುತ್ತೂರು, ಕದ್ರಿ, ಕರ್ನಾಟಕ, ಅರುವ (ಅಳದಂಗಡಿ), ಕುಂಬಳೆ ಬಪ್ಪನಾಡು ಮೇಳ, ಕುಂಬಳೆ, ತಲಕಳ ಮುಂತಾದ ಡೇರೆ-ಬಯಲಾಟ ಮೇಳಗಳಲ್ಲಿ ನಿರಂತರ ಇಪ್ಪತ್ತು ವರ್ಷಗಳ ಕಾಲ ವೃತ್ತಿ ಕಲಾವಿದರಾಗಿಯೂ 17ಕ್ಕೂ ಹೆಚ್ಚು ವರ್ಷಗಳಿಂದ ಅತಿಥಿ ಕಲಾವಿದರಾಗಿಯೂ ಯಕ್ಷಗಾನಕ್ಕೆ ಸೇವೆ ಸಲ್ಲಿಸಿದ್ದಾರೆ. ತನ್ನ ಬಜಪೆ ತಲಕಳದ ಮನೆಯಲ್ಲಿ, ಕಟೀಲು ಮೊದಲಾದೆಡೆ ಯಕ್ಷಗಾನ ಭಾಗವತಿಕೆಯ ತರಗತಿಗಳನ್ನೂ ನಡೆಸಿ ನೂರಾರು ಮಂದಿಗೆ ಗುರುಗಳೂ ಆಗಿದ್ದರು. ಅವರು ಪತಿ, ಖ್ಯಾತ ಹಿಮ್ಮೇಳವಾದಕ ಹರಿನಾರಾಯಣ ಬೈಪಾಡಿತ್ತಾಯ ಇಬ್ಬರು ಪುತ್ರರನ್ನು ಅಗಲಿದ್ದಾರೆ.