ಬೆಂಗಳೂರು: ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ
ಸುನಿಲ್ ವಲ್ಯಾಪುರೆ ಅವರನ್ನು ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕರಾಗಿಯೂ, ಎನ್. ರವಿಕುಮಾರ್ ಅವರನ್ನು
ಮುಖ್ಯ ಸಚೇತರಕರಾಗಿಯೂ ನೇಮಿಸಲಾಗಿದೆ. ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರನ್ನು ವಿಧಾನಸಭೆಯ ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ.
ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಅವರನ್ನು ಕೆಳಮನೆಯ ಮುಖ್ಯಸಚೇತಕರಾಗಿ ನೇಮಿಸಲಾಗಿದೆ.
ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸೂಚನೆ ಮೇರೆಗೆ ಇವರನ್ನು ನೇಮಕ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













