ಸುಳ್ಯ: ಗ್ರಂಥಾಲಯಗಳ ಬಳಕೆ ಹೆಚ್ಚಿದಂತೆಲ್ಲ ನಮ್ಮ ಬೌದ್ಧಿಕ ಮಟ್ಟ ಹೆಚ್ಚುತ್ತದೆ ಮತ್ತು ಒಂದು ಒಳ್ಳೆಯ ಗ್ರಂಥಾಲಯ ಆ ಸಂಸ್ಥೆಯ ಆತ್ಮವಿದ್ದಂತೆ ಎಂದು ಎನ್ನೆಂಸಿಯ ನಿವೃತ್ತ ಪ್ರಾಂಶುಪಾಲ ಮತ್ತು ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಹೇಳಿದರು.ನೆಹರು ಸ್ಮಾರಕ ಮಹಾವಿದ್ಯಾಲಯದ ಗ್ರಂಥಾಲಯ ವಿಭಾಗ ಮತ್ತು ಐಕ್ಯೂಏಸಿ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ
ನಡೆದ ಒಂದು ದಿನದ ಗ್ರಂಥಾಲಯ ಮಾಹಿತಿ ಕಾರ್ಯಾಗಾರದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎಂ. ವಹಿಸಿದ್ದರು. ಸಂಪನ್ಮೂಲ ವ್ಯಕ್ಕಿಯಾಗಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕರಾದ ರಾಮ ಕೆ. ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಕಾರ್ಯಕ್ರಮ ನಿರ್ದೇಶಕರಾದ ಪ್ರೊ. ಶ್ರೀಧರ ವಿ., ಹಾಗೂ ಮಾಹಿತಿ ಕಾರ್ಯಾಗಾರದ ಸಂಯೋಜಕರಾದ ಉಮೇಶ್ ಮಾತನಾಡಿದರು. ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಪದ್ಮಶ್ರೀ ಕಾರ್ಯಕ್ರಮ ನಿರೂಪಿಸಿದರು. ಅಂತಿಮ ಬಿಕಾಂ ವಿದ್ಯಾರ್ಥಿನಿ ರತ್ನಸಿಂಚನ ಬಳಗದವರು ಪ್ರಾರ್ಥನೆಗೈದರು, ಕಾಲೇಜಿನ
ವಿದ್ಯಾರ್ಥಿ ನಾಯಕ ತೃತೀಯ ಬಿಕಾಂ ವಿದ್ಯಾರ್ಥಿ ಜೊಸ್ಬಿನ್ ಬಾಬು ಸ್ವಾಗತಿಸಿ, ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಅಂಕಿತಾ ಅತಿಥಿಗಳನ್ನು ಪರಿಚಯಿಸಿ, ದ್ವಿತೀಯ ಬಿಕಾಂ ವಿದ್ಯಾರ್ಥಿ ಕೀರ್ತನ್ ವಂದಿಸಿದರು. ಕಾಲೇಜಿನ ಐಕ್ಯುಏಸಿ ಸಂಯೋಜಕಿ ಡಾ.ಮಮತಾ ಕೆ., ಪ್ರೊ. ಡಿ.ಎಚ್. ತಿಪ್ಪೇಸ್ವಾಮಿ, ಪ್ರೊ.ಸತ್ಯಪ್ರಕಾಶ್, ಹಿರಿಯ ಉಪನ್ಯಾಸಕರಾದ ಕುಲದೀಪ್ ಪಿ.ಪಿ., ವಿಷ್ಣುಪ್ರಶಾಂತ್, ಅಜಿತ್ ಕುಮಾರ್, ಚಿತ್ರಲೇಖ ಮತ್ತು ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತವಿರಿದ್ದರು.







