ಸುಳ್ಯ: ಸುಳ್ಯ ಲಯನ್ಸ್ ಕ್ಲಬ್ಗೆ ಜಿಲ್ಲಾ ಗವರ್ನರ್ ಭಾರತಿ ಬಿ.ಎಂ.ಅವರ ಅಧಿಕೃತ ಭೇಟಿ ಕಾರ್ಯಕ್ರಮ ಮಾ.22 ರಂದು ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಸೇವಾ ಯೋಜನೆಗಳನ್ನು ಅವರು ಉದ್ಘಾಟಿಸಿದರು. ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಗೆ ಕ್ಲಬ್ ವತಿಯಿಂದ ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ, ಸುಳ್ಯದ ಕುರುಂಜಿಭಾಗ್ ನಲ್ಲಿ
ಸುಮಾರು 4 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸುಸಜ್ಜಿತ ಜೈ ಜವಾನ ಅಟೋ ರಿಕ್ಷಾ ನಿಲ್ದಾಣ, ಆಲೆಟ್ಟಿ ಗ್ರಾಮದ ಕೋಲ್ಚಾರಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಕ್ಲಬ್ ವತಿಯಿಂದ ಪೀಠೋಪಕರಣ ಮತ್ತು ವಿಜ್ಞಾನ ಉಪಕರಣಗಳ ಕೊಡುಗೆ, ಗಾಂಧಿನಗರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೈ ತೋಟದ ನಿರ್ಮಾಣ,ಕೊಡಿಯಾಲಬೈಲಿನಲ್ಲಿರುವ

ಸ.ಹಿ.ಪ್ರಾ.ಶಾಲೆಯ ಆವರಣದಲ್ಲಿ 1 ಎಕ್ರೆ ಜಾಗದಲ್ಲಿ ನಿರ್ಮಿಸಿರುವ ಅಡಿಕೆ ತೋಟಕ್ಕೆ ನೀರಿನ ವ್ಯವಸ್ಥೆಗಾಗಿ ಬೋರ್ ವೆಲ್ ಪಂಪ್ ಉದ್ಘಾಟನೆ, ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಪಯುಕ್ತ ಮಾಹಿತಿ ಒದಗಿಸುವ ಸಲುವಾಗಿ ಸ್ಮಾರ್ಟ್ ಟಿ ವಿ ಅಳವಡಿಸಲಾಗಿದ್ದು
ಗವರ್ನರ್ ಬಿ.ಎಂ.ಭಾರತಿ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಾಮಕೃಷ್ಣ ರೈ,ಜಿಲ್ಲಾ ಕಾರ್ಯದರ್ಶಿ ಗೀತಾ ಆರ್. ರಾವ್, ಕಾರ್ಯದರ್ಶಿ ರಾಮಚಂದ್ರ ಪಲ್ಲತಡ್ಕ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.