ಮಂಗಳೂರು: ವಿಧಾನ ಚುನಾವಣೆ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ಮದ್ಯ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯು 21ರಂದು ಮತದಾನ ನಡೆಯಲಿರುವುದರಿಂದ
ಅಕ್ಟೋಬರ್ 19ರಂದು ಸಂಜೆ 4ಗಂಟೆಯಿಂದ ಅಕ್ಟೋಬರ್ 21ರ ಸಂಜೆ 4ಗಂಟೆಯವರೆಗೆ ಹಾಗೂ ಮತ ಎಣಿಕೆ ದಿನ ಅಕ್ಟೋಬರ್ 24ರಂದು ಬೆಳಿಗ್ಗೆ 6ಗಂಟೆಯಿಂದ ಸಂಜೆ 6ಗಂಟೆಯವರೆಗೆ ಮದ್ಯ ಮುಕ್ತ ದಿನಗಳು ಎಂದು ಘೋಷಿಸಿ ಎಲ್ಲಾ ವಿದಧ ಮದ್ಯದಂಗಡಿಗಳನ್ನು ಮಚ್ಚುವಂತೆ ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶ ಹೊರಡಿಸಿದ್ದಾರೆ.