ನವದೆಹಲಿ: ಭಾರತದ ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಅವರು ಬಿಜೆಪಿಗಡ ಸೇರ್ಪಡೆಯಾಗಿದ್ದಾರೆ.ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನವೇ ಲಿಯಾಂಡರ್ ಪೇಸ್, ಬಿಜೆಪಿ ಸೇರಿಕೊಂಡಿದ್ದಾರೆ.ಈ ವೇಳೆ ಕೇಂದ್ರ ಸಚಿವ ಕಿರಣ್ ರಿಜಿಜು ಹಾಗೂ
ಬಿಜೆಪಿ ಹಿರಿಯ ನಾಯಕರು ಉಪಸ್ಥಿತರಿದ್ದರು.
ಇತ್ತೀಚೆಗೆ ಲಿಯಾಂಡರ್ ಪೇಸ್ ಅವರು ಕೋಲ್ಕತ್ತದಲ್ಲಿ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಭೇಟಿಯಾಗಿದ್ದರು. ಆ ಬಳಿಕ ಅವರು ಬಿಜೆಪಿ ಸೇರಬಹುದು ಎಂದು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿತ್ತು.
ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ ಏ.23 ಹಾಗೂ ಏ.29ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೇ.4ರಂದು ಮತ ಎಣಿಕೆ ಪ್ರಕ್ರಿಯೆ ಜರುಗಲಿದೆ.










