ಮರ್ಕಂಜ:ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಮೂಡ್ನೂರು ಸರಕಾರಿ ಹಿರಿಯ ಪ್ರಾಥಮಿ ಕಶಾಲೆಯಲ್ಲಿ ಎಲ್ಕೆಜಿ-ಯುಕೆಜಿ ತರಗತಿಗಳನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.ಹಲವು ವರ್ಷಗಳ ಬೇಡಿಕೆಯನ್ನು
ಪರಿಗಣಿಸಿ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಅದೇಶ ಮಾಡಿತ್ತು. ಈ ಬಾರಿ ಶೈಕ್ಷಣಿಕ ವರುಷದ ಆರಂಭದಲ್ಲಿ 20ಕ್ಕೂ ಹೆಚ್ಚು ಮಕ್ಕಳ ದಾಖಲಾತಿಯೊಂದಿಗೆ ಇಂದು ಉದ್ಘಾಟನೆ ನಡೆಯಿತು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಜಯಕುಮಾರ್ ಎರ್ಮೆಟ್ಟಿ, ಶಾಲಾ ಮುಖ್ಯೋಪಾಧ್ಯಾಯ ದೇವರಾಜ್ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವೀನ್ ನಳಿಯಾರು, ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಗೀತಾ ಹೋಸೊಳಿಕೆ. ಮಾಜಿ ಗ್ರಾಮ ಪಂಚಾಯತಿ ಸದಸ್ಯ ಗೊವಿಂದ ಆಳವುಪಾರೆ,ಶಾಲಾ ಶಿಕ್ಷಕರು, ಪೋಷಕರು ಹಳೆ ವಿದ್ಯಾರ್ಥಿಗಳು ಊರಿನ ಹಿರಿಯರು ಉಪಸ್ಥಿತರಿದ್ದರು.













