ಸುಳ್ಯ: ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಸುಳ್ಯ ತಾಲೂಕು ಕಚೇರಿಯಲ್ಲಿ ನಡೆಯಿತು. ಲೋಕಾಯುಕ್ತ ಡಿವೈಎಸ್ಪಿ ಡಾ.ಗಾನಾ ಪಿ ಕುಮಾರ್ ನೇತೃತ್ವದಲ್ಲಿ ಸಾರ್ವಜನಿಕರಿಂದ
ಅಹವಾಲು ಸ್ವೀಕರಿಸಿದರು.ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ಅಮಾನುಲ್ಲ, ಸುರೇಶ್ ಕುಮಾರ್ ಪಿ ಹಾಗೂ ಇತರ ಸಿಬ್ಬಂದಿಗಳು ಭಾಗವಹಿಸಿ ಅಹವಾಲು ಸ್ವೀಕರಿಸಿದರು.ರಸ್ತೆ ಸಮಸ್ಯೆ, ಕುಡಿಯುವ ನೀರಿನ ಯೋಜನೆ, ಪಹಣಿ ಪತ್ರ ಸಮಸ್ಯೆ ಮತ್ತಿತರ ವಿವಿಧ ಸಾರ್ವಜನಿಕ ಹಾಗೂ ವೈಯುಕ್ತಿಕ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ದೂರು ನೀಡಿದರು. ಈ ಹಿಂದೆ ನೀಡಿದ ದೂರಿನ ಕುರಿತು ಪರಿಶೀಲನೆ ನಡೆಸಿ ವರದಿ ಪಡೆಯಲಾಯಿತು. ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ನಂದಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ರಮೇಶ್, ಪ್ರೊಬೇಷನರಿ ಎಸಿಎಫ್ ಶಿವಾನಂದ್,ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ವಿಮಲ್ ಬಾಬು, ಗಿರೀಶ್ ಆರ್, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ರುಕ್ಕು, ಸಹಾಯಕ ಇಂಜಿನಿಯರ್ಗಳಾದ ಮಣಿಕಂಠ, ಜನಾರ್ಧನ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ನಿತಿನ್ ಪ್ರಭು, ನಗರ ಪಂಚಾಯತ್ ಮುಖ್ಯಾಧಿಕಾರಿ ಬಿ.ಎಂ.ಡಾಂಗೆ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗೋಪಾಲ್, ಮೆಸ್ಕಾಂ ಎಇಇ ಹರೀಶ್ ನಾಯ್ಕ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಉಮಾದೇವಿ, ಸರ್ವೆ ಸೂಪರ್ವೈಸರ್ ಉದಯಕುಮಾರ್, ತೋಟಗಾರಿಕಾ ಅಧಿಕಾರಿ ಅರಬಣ್ಣ ಪೂಜೇರಿ, ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
ವಿವಿಧ ಇಲಾಖೆಗಳಿಗೆ ಸಂಬಂಧಿಸಿ ಒಟ್ಟು 10 ದೂರುಗಳನ್ನು ಸಾರ್ವಜನಿಕರು ದಾಖಲಿಸಿದರು
.