ಸುಳ್ಯ: ಕರ್ನಾಟಕ ರಾಜ್ಯ ಲೋಕಾಯುಕ್ತ ಪೋಲಿಸ್ ಅಧಿಕಾರಿಗಳು ಸುಳ್ಯ ತಾಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಬುಧವಾರ ಬೆಳ್ಳಂಬೆಳಗ್ಗೆ ಕಚೇರಿಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು.ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಹಾಲ್ ಮೂರ್ತಿ ರಾವ್ ನೇತೃತ್ವದಲ್ಲಿ
ಪೋಲಿಸ್ ಅಧಿಕಾರಿಗ ತಂಡ ಸುಳ್ಯ ತಾಲೂಕು ಕಛೇರಿಗೆ
ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ಕಡತಗಳನ್ನು ಪರಿಶೀಲಿಸಿ ಸಿಬ್ಬಂದಿಗಳಿಂದ ಮಾಹಿತಿ ಪಡೆದರು.ತಾಲೂಕು ಕಚೇರಿಯ ವಿವಿಧ ಕಡತಗಳನ್ನು ಪರಿಶೀಲಿಸಿದರು. ತಾಲೂಕು ಕಚೇತಿಯ ವಿವಿಧ ವಿಭಾಗಗಳಲ್ಲಿ ಪರಿಶೀಲಿಸಿ ಎಲ್ಲಾ ಕಚೇರಿಗಳಲ್ಲಿ ಇರುವ ಅರ್ಜಿಗಳ ಪರಿಶೀಲಿಸಿದರು. ಸಾರ್ವಜನಿಕರಿಂದ ಬಂದ ಅರ್ಜಿ ಪೆಂಡಿಂಗ್ ಇರುವ ಬಗ್ಗೆ ಪ್ರಶ್ನಿಸಿದರು. ಸಾರ್ವಜನಿಕರಿಂದ

ಅಹವಾಲು ಸ್ವೀಕರಿಸಿದರು. ತಹಶೀಲ್ದಾರ್ ಮತ್ತು ಅಧಿಕಾರಿ, ಸಿಬ್ಬಂದಿಗಳಿಂದ ಮಾಹಿತಿ ಪಡೆದರು.
ತಾಲೂಕು ಕಚೇರಿಯಲ್ಲಿ ಟಾಯ್ಲೆಟ್ ಸರಿ ಇಲ್ಲದ ಬಗ್ಗೆ, ಇತರ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿರು.ತಂಡದಲ್ಲಿ

ಸಿಬ್ಬಂದಿಗಳಾದ ನಾಗೇಶ್ ಉಡುಪ , ನಾಗರಾಜ್ , ಪುಸ್ಪಾವತಿ , ಸುದೀಪ್, ರವಿ ಮತ್ತಿತರರು ಉಪಸ್ಥಿತರಿದ್ದರು.
ತಾಲೂಕು ಕಛೇರಿಯಲ್ಲಿ ಕುಳಿತುಕೊಂಡಿದ್ದ ಸಾರ್ವಜನಿಕರು ಸೇರಿದಂತೆ ಪ್ರತಿಯೊಬ್ಬರಿಂದ ಲೋಕಾಯುಕ್ತ ಪೋಲಿಸ್ ಅಧಿಕಾರಿಗಳು ಮಾಹಿತಿ ಪಡೆದರು.





























