ಸುಬ್ರಹ್ಮಣ್ಯ:ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಬ್ರಹ್ಮಾವರ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬ್ರಹ್ಮಾವರ ವಲಯ ಏರ್ಪಡಿಸಿದ ಛಾಯಾರತ್ನ’ ಪ್ರಶಸ್ತಿಗೆ ಸುಬ್ರಹ್ಮಣ್ಯದ ಹಿರಿಯ ಛಾಯಾಗ್ರಾಹಕ, ಪತ್ರಕರ್ತ ಲೋಕೇಶ್ ಬಿ.ಎನ್. ಭಾಜನರಾಗಿದ್ದಾರೆ. ಬ್ರಹ್ಮಾವರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಲೋಕೇಶ್ ಬಿ.ಎನ್. ಅವರು ನಾಲ್ಕು ದಶಕಗಳಿಗೂ ಅಧಿಕ ಕಾಲ ಛಾಯಾಗ್ರಾಹಕರಾಗಿ, ಕಾರ್ಯನಿರ್ವಹಿಸುತ್ತಾರೆ. ಸುಬ್ರಹ್ಮಣ್ಯದಲ್ಲಿ ‘ಶಾಂತಲಾ ಸ್ಟುಡಿಯೋ ನಡೆಸುತ್ತಾರೆ. ಪ್ರಜಾವಾಣಿ ದಿನಪತ್ರಿಕೆಯ ಸುಬ್ರಹ್ಮಣ್ಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.








































