ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಮೊದಲ ಪಟ್ಟಿ ಪ್ರಕಟಿಸಿದ್ದು, 39 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡ್ನಿಂದ ಸ್ಪರ್ಧಿಸಲಿದ್ದಾರೆ. ಕೇರಳದ ಅಲಪ್ಪುಳದಿಂದ ಕೆ.ಸಿ.ವೇಣುಗೋಪಾಲ್, ತಿರುವನಂತಪುರಂನಿಂದ ಡಾ. ಶಶಿ ತರೂರ್ ಅವರನ್ನು
ಕಾಂಗ್ರೆಸ್ ಕಣಕ್ಕಿಳಿಸಿದೆ. ಕಾಸರಗೋಡಿನಿಂದ ಹಾಲಿ ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ಅವರಿಗೆ ಮತ್ತೆ ಅವಕಾಶ ನೀಡಲಾಗಿದೆ.
ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್, ತುಮಕೂರಿನಿಂದ ಮುದ್ದ ಹನುಮೇಗೌಡ, ವಿಜಯಪುರದಿಂದ ಎಸ್.ಆರ್. ಅಲಗೂರ, ಹಾವೇರಿಯಿಂದ ಆನಂದಸ್ವಾಮಿ ಗಡ್ಡದವೇರಮಠ, ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ.ಸುರೇಶ್ ಹಾಗೂ ಹಾಸನದಿಂದ ಶ್ರೇಯಸ್ ಪಟೇಲ್, ಚಿತ್ರದುರ್ಗದಿಂದ ಬಿ.ಎನ್.ಚಂದ್ರಪ್ಪ ಮಂಡ್ಯದಿಂದ ವೆಂಕಟರಮಣಗೌಡ (ಸ್ಟಾರ್ ಚಂದ್ರು) ಹೆಸರನ್ನು ಪಕ್ಷ ಅಂತಿಮಗೊಳಿಸಿದೆ.
ಉಳಿದಂತೆ ಛತ್ತೀಸಗಢ 6; ಕೇರಳ– 16; ಲಕ್ಷದ್ವೀಪ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ತಲಾ 1, ಮೇಘಾಲಯ 2; ತೆಲಂಗಾಣ– 4 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.














